ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ತಡೆಯಾಜ್ಞೆ ತೆರವುಗೊಳಿಸಲಾಗಿದೆ.
ಹೈಕೋರ್ಟ್ ವಿಭಾಗೀಯ ಪೀಠ ದಿಂದ ಮೀಸಲಾತಿಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದೆ. 59 ನಗರ ಸ್ಥಳೀಯ ಸಂಸ್ಥೆಗಳ ಮೀಸಲಾತಿ ನಿಗದಿ ಮಾಡಿ ರಾಜ್ಯ ಸರ್ಕಾರ ಅಕ್ಟೋಬರ್ 8 ರಂದು ಅಧಿಸೂಚನೆ ಹೊರಡಿಸಿತ್ತು.
ಮೀಸಲಾತಿ ನಿಗದಿಯಲ್ಲಿ ರೋಸ್ಟರ್ ಪಾಲಿಸಿಲ್ಲ ಎಂದು ಅರ್ಜಿದಾರರು ಹೇಳಿದ್ದು ಏಕಸದಸ್ಯ ಪೀಠ ಅಕ್ಟೋಬರ್ 15 ರಂದು ತಡೆಯಾಜ್ಞೆ ನೀಡಿತ್ತು. ಸರ್ಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದು, ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆದು ತಡೆಯಾಜ್ಞೆಯನ್ನು ತೆರವುಗೊಳಿಸಿ ನವಂಬರ್ 2 ರೊಳಗೆ ಚುನಾವಣೆ ನಡೆಸುವಂತೆ ನಿರ್ದೇಶನ ನೀಡಲಾಗಿದೆ.