alex Certify ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಧಾರವಾಡ: 2020-21 ನೇ ಸಾಲಿಗೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಆರ್. ಅಂಬೇಡ್ಕರ್, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 25, 2020 ಕೊನೆಯ ದಿನವಾಗಿರುತ್ತದೆ. ಮಗುವಿನ SATS NUMBER (SATS NUMBER ನಲ್ಲಿ ಮಗುವಿನ ಸಂಪೂರ್ಣ ಮಾಹಿತಿಯನ್ನು ದಾಖಲಿಸಿರಬೇಕು) ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ಪ.ಜಾತಿ/ಪ.ಪಂಗಡ ಹೊರತುಪಡಿಸಿ ಕಡ್ಡಾಯವಾಗಿ ಪ್ರಸ್ತುತ ವರ್ಷದ್ದಾಗಿರಬೇಕು).  ಮಗುವಿನ ಆಧಾರ್ ಜೆರಾಕ್ಸ್, ಪಡಿತರ ಚೀಟಿಯ ಜೆರಾಕ್ಸ್, ಮಗುವಿನ ಇತ್ತೀಚಿನ ಭಾವಚಿತ್ರ, ಪೋಷಕರ ಆಧಾರ್ ಜೆರಾಕ್ಸ್ ಪ್ರತಿ ದಾಖಲೆಗಳನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ http://kea.kar.nic.in & http://kreis.kar.nic.in ಅಥವಾ  ಜಂಟಿ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ 0836-2447201 ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...