
ಉಡುಪಿ: ಪೊಲೀಸ್ ಇಲಾಖೆ ಸೇವೆಯಿಂದ ನಿವೃತ್ತರಾದ ಪೊಲೀಸ್ ಅಧಿಕಾರಿ ತಮ್ಮದೇ ಬೀಳ್ಕೊಡುಗೆ ಸಮಾರಂಭದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿಯ ಕೋಟ ಪೊಲೀಸ್ ಠಾಣೆಯ ಎಎಸ್ಐ ಆನಂದ ವೆಂಕಟರಾಮ್ ಮೃತಪಟ್ಟವರು ಎಂದು ಹೇಳಲಾಗಿದೆ.
ವಯೋನಿವೃತ್ತರಾಗಿದ್ದ ಅವರಿಗೆ ಪೊಲೀಸ್ ಇಲಾಖೆಯಿಂದ ಬೀಳ್ಕೊಡುಗೆ ನೀಡಲಾಗಿದೆ. ತಮ್ಮದೇ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಊಟ ಮಾಡುವಾಗಲೇ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.