ಬೆಂಗಳೂರು: ಬಿಸಿಯೂಟದ ಬದಲಿಗೆ ವಿದ್ಯಾರ್ಥಿಗಳಿಗೆ ಆಯಾ ದಿನದ ಆಹಾರ ಪ್ರಮಾಣಕ್ಕೆ ಅನುಗುಣವಾಗಿ ಆಹಾರ ಧಾನ್ಯ ನೀಡಲು ಸರ್ಕಾರ ಆದೇಶಿಸಿದ್ದು ಅದರಂತೆ ರಜೆದಿನ ಹೊರತಾದ ದಿನಗಳಿಗೆ ಆಹಾರಧಾನ್ಯ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಲಾಕ್ಡೌನ್ ಜಾರಿಯಾಗಿದ್ದ ಸಂದರ್ಭದಲ್ಲಿ ಶಾಲೆ ಬಂದ್ ಆಗಿದ್ದು, ಮಕ್ಕಳಿಗೆ ಬಿಸಿಯೂಟದ ಬದಲಿಗೆ ಆಯಾ ದಿನದ ಆಹಾರ ಪ್ರಮಾಣಕ್ಕೆ ಅನುಗುಣವಾಗಿ ಆಹಾರ ಧಾನ್ಯ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಜೂನ್, ಜುಲೈ, ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಆಹಾರಧಾನ್ಯ ವಿತರಿಸಲಾಗುತ್ತದೆ. ರಜೆ ದಿನ ಹೊರತುಪಡಿಸಿ ಉಳಿದ ದಿನಗಳಿಗೆ ಬಿಸಿಯೂಟ ಬದಲಾಗಿ ಆಹಾರ ಭದ್ರತೆ ಭತ್ಯೆಯನ್ವಯ ನಿಗದಿತ ಪ್ರಮಾಣದಲ್ಲಿ ಅಕ್ಕಿ, ಗೋಧಿ, ತೊಗರಿಬೇಳೆ ವಿತರಿಸಲಾಗುವುದು ಎಂದು ಹೇಳಲಾಗಿದೆ.