alex Certify APL, BPL ಕಾರ್ಡ್ ಗೆ ಪಡಿತರ ವಿತರಣೆ: ಸಚಿವರಿಂದ ʼಗುಡ್ ನ್ಯೂಸ್ʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

APL, BPL ಕಾರ್ಡ್ ಗೆ ಪಡಿತರ ವಿತರಣೆ: ಸಚಿವರಿಂದ ʼಗುಡ್ ನ್ಯೂಸ್ʼ

ಚಿತ್ರದುರ್ಗ: ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ ಕುಟುಂಬದವರಿಗೂ ಪಡಿತರ ವಿತರಣೆ ಮಾಡಲಾಗುತ್ತಿದೆ ಎಂದು ಆಹಾರ ಖಾತೆ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಗೆ 1.88 ಲಕ್ಷ ಅರ್ಜಿ ಸಲ್ಲಿಸಿದ್ದು ಪರಿಶೀಲನೆ ನಡೆಸಿ ಬಾಕಿ ಉಳಿದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಬಿಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸಿದವರಿಗೆ ಪಡಿತರ ವಿತರಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ರಮ ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು. ಏಪ್ರಿಲ್ ನಲ್ಲಿ 146 ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ 14 ಸಾವಿರ ಎಪಿಎಲ್ ಕಾರ್ಡ್ ದಾರರು ಇದ್ದು ಅವರಿಗೂ ಕೂಡ ಎರಡು ತಿಂಗಳ ಅಕ್ಕಿಯನ್ನು 15 ರೂಪಾಯಿ ದರದಲ್ಲಿ ವಿತರಿಸಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...