
ಬೈಕಿನಿಂದ ಹಾರಿಬಿದ್ದ ಯುವಕನನ್ನ 30 ವರ್ಷದ ಪ್ರಶಾಂತ್ ಎಂದು ಗುರುತಿಸಲಾಗಿದೆ. ಅಪಘಾತದದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡಿದ್ದ ಪ್ರಶಾಂತ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
ಮೃತ ವ್ಯಕ್ತಿ ಖಾಸಗಿ ಕಂಪನಿಯೊಂದರಲ್ಲಿ ಸೂಪರ್ವೈಸರ್ ಆಗಿದ್ದರು ಎನ್ನಲಾಗಿದೆ. ವಾಹನದಿಂದ ಅಪಘಾತವಾಗೋದನ್ನ ತಪ್ಪಿಸಲು ಹೋಗಿ ಬೈಕ್ ಸವಾರ ಈ ರೀತಿ ದುರಂತ ಸಾವಿಗೀಡಾಗಿದ್ದಾನೆ ಎನ್ನಲಾಗಿದೆ. ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಘಟನೆ ಸಂಬಂಧ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.