alex Certify ಪೊಲೀಸರ ಭರ್ಜರಿ ಬೇಟೆ, ಇಬ್ಬರು ಮಹಿಳೆಯರು ಸೇರಿ ಮೂರು ಮಂದಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸರ ಭರ್ಜರಿ ಬೇಟೆ, ಇಬ್ಬರು ಮಹಿಳೆಯರು ಸೇರಿ ಮೂರು ಮಂದಿ ಅರೆಸ್ಟ್

ಬೆಂಗಳೂರು: ಮಾರಕಾಸ್ತ್ರ ತೋರಿಸಿ ದರೋಡೆ ಮಾಡುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬೆಂಗಳೂರು ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಜ್ಜಾದ್, ಶಾಜಿಯಾ ಮತ್ತು ಫಾಹಿಮಾ ಬಂಧಿತ ಆರೋಪಿಗಳು ಎಂದು ಹೇಳಲಾಗಿದೆ. ಒಂಟಿಯಾಗಿ ತಿರುಗಾಡುವವರನ್ನೇ ಟಾರ್ಗೆಟ್ ಮಾಡಿಕೊಂಡು ಇವರು ದರೋಡೆ ಮಾಡುತ್ತಿದ್ದರು. ಮಾರಕಾಸ್ತ್ರಗಳನ್ನು ತೋರಿಸಿ ದರೋಡೆ ನಡೆಸುತ್ತಿದ್ದ ಈ ತಂಡದಿಂದ ಸುಮಾರು 4 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಕಳೆದ ತಿಂಗಳು ಇದಾಯತ್ ಎಂಬುವರ ಮೇಲೆ ಹಲ್ಲೆ ಮಾಡಿದ್ದ ಇವರು ದರೋಡೆ ನಡೆಸಿದ್ದು ನಂದಿನಿ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡು ಮೂವರನ್ನು ಬಂಧಿಸಿದ್ದಾರೆ. ಬಂಧಿತರು ಬೆಂಗಳೂರಿನ ಬಸವನಗುಡಿ, ಜೆಪಿ ನಗರ, ಕೆಆರ್ ಪುರಂ ಸೇರಿದಂತೆ ಹಲವು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದರೋಡೆ ನಡೆಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...