alex Certify ಬಿಗ್ ನ್ಯೂಸ್: ಆಕಸ್ಮಿಕವಾಗಿ ಹಾರಿದ ಗುಂಡು, ಹಿರಿಯ ಐಪಿಎಸ್ ಅಧಿಕಾರಿ ಆರ್.ಪಿ. ಶರ್ಮಾ ಗಂಭೀರ – ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಆಕಸ್ಮಿಕವಾಗಿ ಹಾರಿದ ಗುಂಡು, ಹಿರಿಯ ಐಪಿಎಸ್ ಅಧಿಕಾರಿ ಆರ್.ಪಿ. ಶರ್ಮಾ ಗಂಭೀರ – ಆಸ್ಪತ್ರೆಗೆ ದಾಖಲು

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಆರ್.ಪಿ. ಶರ್ಮಾ ಆಕಸ್ಮಿಕವಾಗಿ ಗುಂಡು ಹಾರಿಸಿಕೊಂಡಿದ್ದು ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊತ್ತನೂರಿನ ನಿವಾಸದಲ್ಲಿ ಮಿಸ್ ಫೈರಿಂಗ್ ಆಗಿದ್ದು ಅವರ ಎದೆ ಭಾಗಕ್ಕೆ ಗುಂಡೇಟು ತಗುಲಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

ಸರ್ವೀಸ್ ರಿವಾಲ್ವರ್ ಕ್ಲೀನ್ ಮಾಡುವ ವೇಳೆ ಆರ್.ಪಿ. ಶರ್ಮಾ ಆಕಸ್ಮಿಕವಾಗಿ ಗುಂಡು ಹಾರಿಸಿಕೊಂಡಿದ್ದಾರೆ. ಮಿಸ್ ಫೈರಿಂಗ್ ಆಗಿದೆ ಎನ್ನಲಾಗಿದೆ. ಅವರೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿರಬಹುದೆಂದೂ ಹೇಳಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಕರ್ನಾಟಕ ಪೊಲೀಸ್ ವಸತಿ ನಿಗಮದ ಡಿಜಿಯಾಗಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...