
ಬೆಂಗಳೂರು: ನವೆಂಬರ್ 3 ರಂದು ಶಿರಾ ಮತ್ತು ಆರ್.ಆರ್. ನಗರ ಕ್ಷೇತ್ರದ ವಿಧಾನಸಭೆ ಉಪಚುನಾವಣೆಗೆ ಮತದಾನ ನಡೆಯಲಿದೆ.
ಮತದಾನ ಮುಕ್ತಾಯಕ್ಕೆ ನಿಗದಿಯಾದ ಗಡುವಿಗೆ 48 ಗಂಟೆಗಳ ಮೊದಲು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಇವತ್ತು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದ್ದು ನಾಳೆ ಮನೆ ಮನೆ ಪ್ರಚಾರ ಮಾಡಲು ಅವಕಾಶವಿರುತ್ತದೆ.
ಬಹಿರಂಗ ಪ್ರಚಾರ ಮುಕ್ತಾಯವಾದ ನಂತರ ಕ್ಷೇತ್ರದ ಮತದಾರರಲ್ಲದವರು ಕ್ಷೇತ್ರವನ್ನು ಬಿಡುವಂತೆ ತಿಳಿಸಲಾಗಿದೆ ಚುನಾವಣಾ ಆಯೋಗ ವತಿಯಿಂದ ಕ್ಷೇತ್ರದ ಹೊರಗಿನವರು ತೆರಳುವಂತೆ ಸೂಚನೆ ನೀಡಲಾಗಿದೆ.
ಪ್ರಚಾರಕ್ಕೆ ಬಂದ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ತೆರಳುವಂತೆ ತಿಳಿಸಲಾಗಿದೆ. ಬಹಿರಂಗ ಪ್ರಚಾರಕ್ಕೆ ಕೊನೆ ದಿನವಾದ ಇಂದು ಘಟಾನುಘಟಿ ನಾಯಕರು ಆರ್.ಆರ್. ನಗರ, ಶಿರಾ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.