
ಆರ್ಥಿಕವಾಗಿ ಹಿಂದುಳಿದವರಿಗೂ ಖಾಸಗಿ ಶಾಲೆಗಳಲ್ಲಿ ಪ್ರವೇಶಾತಿ ಸಿಗಲೆಂದು ಶಿಕ್ಷಣ ಹಕ್ಕು ಕಾಯ್ದೆಯನ್ನು ಈಗಾಗಲೇ ಜಾರಿಗೊಳಿಸಲಾಗಿದೆ. ಆದರೆ ಕೊರೊನಾ ಕಾರಣಕ್ಕೆ ಕಳೆದ ಎಂಟು ತಿಂಗಳಿಂದ ಬಂದ್ ಆಗಿದ್ದ ಶಾಲೆಗಳು ಈಗ ಒಂದೊಂದಾಗಿ ಪುನರಾರಂಭವಾಗುತ್ತಿವೆ. ಇದೀಗ 2021-22 ನೇ ಸಾಲಿನ ಆರ್ ಟಿ ಇ ಪ್ರವೇಶ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
ಮಾರ್ಚ್ 8ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಶಿಕ್ಷಣ ಇಲಾಖೆ ಅವಕಾಶ ಕಲ್ಪಿಸಿದ್ದು, ಮೊದಲ ಸುತ್ತಿನ ಸೀಟುಗಳ ದಾಖಲಾತಿ ಪ್ರಕ್ರಿಯೆ ಏಪ್ರಿಲ್ 27ರಿಂದ ಪ್ರಾರಂಭವಾಗಲಿದೆ. ಸೀಟುಗಳ ಹಂಚಿಕೆಯನ್ನು ಲಾಟರಿ ಪ್ರಕ್ರಿಯೆ ಮೂಲಕ ನಡೆಸಲಾಗುತ್ತದೆ.
ಶಿಕ್ಷಣ ಇಲಾಖೆ ಹೊರಡಿಸಿರುವ ಆರ್ ಟಿ ಇ ವೇಳಾಪಟ್ಟಿ ಕೆಳಕಂಡಂತಿದೆ. ಫೆಬ್ರವರಿ 15ರಂದು ಶಾಲೆಗಳಲ್ಲಿ ತಾತ್ಕಾಲಿಕ ಪಟ್ಟಿ ಪ್ರಕಟವಾಗಲಿದ್ದು, ಫೆಬ್ರವರಿ 20ರವರೆಗೆ ನೆರೆಹೊರೆ ಶಾಲೆಗಳ ಕುರಿತು ಆಕ್ಷೇಪ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಫೆಬ್ರವರಿ 25ರಂದು ನೆರೆಹೊರೆ ಶಾಲೆಗಳ ಅಂತಿಮ ಪಟ್ಟಿ ಪ್ರಕಟವಾಗಲಿದೆ.
ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ
ಮಾರ್ಚ್ 3ರಿಂದ 4 ರವರೆಗೆ ಪ್ರಾಯೋಗಿಕವಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ಮಾರ್ಚ್ 8 ರಿಂದ ಏಪ್ರಿಲ್ 8 ರ ವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮಾರ್ಚ್ 9 ರಿಂದ ಏಪ್ರಿಲ್ 12 ರವರೆಗೆ ಈ ಅರ್ಜಿಗಳ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 19 ಕ್ಕೆ ಲಾಟರಿ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ. ಏಪ್ರಿಲ್ 27 ರಿಂದ ಮೇ 10 ರವರೆಗೆ ಸೀಟುಗಳಿಗೆ ದಾಖಲಾತಿ ಪ್ರಕ್ರಿಯೆ ನಡೆಯಲಿದೆ.