
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆಯಡಿ(ಆರ್.ಟಿ.ಇ.) 2020 -21 ನೇ ಸಾಲಿನ ಪ್ರವೇಶ ಕೋರಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ವಿಸ್ತರಿಸಿದೆ.
ಪೋಷಕರಿಂದ ದಿನಾಂಕ ವಿಸ್ತರಣೆಗೆ ಒತ್ತಾಯ ಕೇಳಿಬಂದ ಹಿನ್ನೆಲೆಯಲ್ಲಿ ಮತ್ತು ಹೆಚ್ಚು ಮಕ್ಕಳಿಗೆ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.
ಜುಲೈ 8 ರವರೆಗೆ ಶಿಕ್ಷಣ ಹಕ್ಕು ಕಾಯ್ದೆಯಡಿ ಪ್ರವೇಶ ಬಯಸುವ ಮಕ್ಕಳ ಪೋಷಕರು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ ಎನ್ನಲಾಗಿದೆ.