ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆಯಡಿ(ಆರ್.ಟಿ.ಇ.) ಶಾಲೆಗೆ ಪ್ರವೇಶ ಕಲ್ಪಿಸಲು ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2020 -21 ನೇ ಸಾಲಿನ ಆರ್.ಟಿ.ಇ. ಪ್ರವೇಶಕ್ಕೆ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಜುಲೈ 22 ರಂದು ನಡೆಯಬೇಕಿದ್ದ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಜುಲೈ 29ರಂದು ನಡೆಸಲಾಗುವುದು.
ಆನ್ ಲೈನ್ ತಂತ್ರಾಂಶದ ಮೂಲಕ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ನಡೆಯಲಿದೆ. ಜುಲೈ 30 ರಿಂದ ಆಗಸ್ಟ್ 10 ರ ವರೆಗೆ ದಾಖಲಾತಿ ಪ್ರಕ್ರಿಯೆ ಮತ್ತು ಮಕ್ಕಳ ವಿವರ ದಾಖಲು ಮಾಡುವುದು.
ಆಗಸ್ಟ್ 17ರಂದು ಆನ್ ಲೈನ್ ತಂತ್ರಾಂಶದ ಮೂಲಕ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ನಡೆಸಲಾಗುವುದು. ಆಗಸ್ಟ್ 18 ರಿಂದ 25 ರವರೆಗೆ ದಾಖಲಾತಿ ಮತ್ತು ಮಕ್ಕಳ ವಿವರವನ್ನು ತಂತ್ರಾಂಶದಲ್ಲಿ ಅಪ್ಲೋಡ್ ಮಾಡಲಾಗುವುದು ಮಾಹಿತಿಗಾಗಿ www.schooleducation.kar.nic.in/ ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.