ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ(ಆರ್.ಟಿ.ಇ.) ಅಡಿ ಸೀಟು ಹಂಚಿಕೆ ಪ್ರಕ್ರಿಯೆ ಮುಂದೂಡಲಾಗಿದೆ. ಶೀಘ್ರದಲ್ಲಿಯೇ ಮುಂದೂಡಿಕೆ ದಿನಾಂಕವನ್ನು ತಿಳಿಸಲಾಗುವುದು ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
ಶಿಕ್ಷಣ ಇಲಾಖೆಯ ಕೆಲವು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ್ದು ಬಹುತೇಕ ಸಿಬ್ಬಂದಿ ಕ್ವಾರಂಟೈನ್ ನಲ್ಲಿ ಇರುವ ಕಾರಣದಿಂದ ಆರ್.ಟಿ.ಇ. ಸೀಟು ಹಂಚಿಕೆ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಮುಂದೂಡಿಕೆ ಮಾಡಿದ್ದು ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು.
ಇನ್ನು 2020 -201 ನೇ ಸಾಲಿನ ಆರ್.ಟಿ.ಇ. ಪ್ರವೇಶದಡಿ ಸೀಟು ಹಂಚಿಕೆ ಮೊದಲನೇ ಸುತ್ತಿನಲ್ಲಿ ಕೆಲವು ದೂರುಗಳು ಬಂದಿದ್ದು ಇವು ಇತ್ಯರ್ಥವಾಗದೇ ಇರುವ ಕಾರಣ ಎರಡನೇ ಸುತ್ತಿನ ಸೀಟು ಹಂಚಿಕೆ ಮುಂದೂಡಿಕೆ ಮಾಡಲಾಗಿದೆ ಎಂದು ಹೇಳಲಾಗಿದೆ.