ಮಡಿಕೇರಿ: ಸಾಲ ಮರುಪಾವತಿ ಮಾಡಲು ರೈತರಿಗೆ ಜೂನ್ 30 ಕೊನೆಯ ದಿನವಾಗಿದ್ದು ಇದನ್ನು ಡಿಸೆಂಬರ್ ವರೆಗೂ ವಿಸ್ತರಿಸಬೇಕೆಂಬ ಒತ್ತಾಯ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಾಲ ಮರುಪಾವತಿ ಅವಧಿಯನ್ನು ವಿಸ್ತರಣೆ ಮಾಡಲು ಚಿಂತನೆ ನಡೆದಿದೆ.
ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಈ ಕುರಿತು ಮಾತನಾಡಿ, ಎರಡು ದಿನದಲ್ಲಿ ಈ ಬಗ್ಗೆ ತೀರ್ಮಾನ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ. ಸಾಲ ಮರುಪಾವತಿ ಅವಧಿಯನ್ನು ಈ ವರ್ಷದ ಅಂತ್ಯದವರೆಗೆ ವಿಸ್ತರಣೆ ಮಾಡಲು ಆರ್ಥಿಕ ಇಲಾಖೆಗೆ ಪತ್ರ ಬರೆದು ಮನವಿ ಮಾಡಲಾಗಿದೆ. ಸಿಎಂ ಯಡಿಯೂರಪ್ಪ ಅವರಿಗೆ ಕೂಡ ಮನವಿ ಮಾಡಿದ್ದು ಇನ್ನು ಎರಡು ಮೂರು ದಿನದಲ್ಲಿ ತೀರ್ಮಾನ ಪ್ರಕಟವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ಕಳೆದ ವರ್ಷ ರೈತರಿಗೆ 13,500 ಕೋಟಿ ರೂಪಾಯಿ ಸಾಲ ನೀಡಿದ್ದು ಈ ವರ್ಷ ಹೆಚ್ಚುವರಿಯಾಗಿ ಒಂದು ಸಾವಿರ ಕೋಟಿ ರೂಪಾಯಿ ನಬಾರ್ಡ್ ನಿಂದ ಬಂದಿರುವುದರಿಂದ 14,500 ಕೋಟಿ ರೂಪಾಯಿ ಸಾಲ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.