ಬೆಂಗಳೂರು: ಸಾರಿಗೆ ಇಲಾಖೆ ಸಿಬ್ಬಂದಿಗೆ ಸಚಿವರಿಂದ ಸಿಹಿ ಸುದ್ದಿ ಸಿಕ್ಕಿದೆ. ಕೆಎಸ್ಸಾರ್ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ ಮತ್ತು ಈಶಾನ್ಯ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗೆ ವೇತನವನ್ನು ಭರಿಸಲು ಒಟ್ಟು 961 ಕೋಟಿ ರೂಪಾಯಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು ಈಗಾಗಲೇ ಜೂನ್ ಮತ್ತು ಜುಲೈ ತಿಂಗಳ ಸಂಬಳಕ್ಕಾಗಿ 426 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಸಾರಿಗೆ ಸಚಿವರಾದ ಡಿಸಿಎಂ ಲಕ್ಷ್ಮಣ ಸವದಿ ಮಾಹಿತಿ ನೀಡಿದ್ದಾರೆ..
ಜೂನ್ ತಿಂಗಳಿನಿಂದ ಸೆಪ್ಟಂಬರ್ ತಿಂಗಳವರೆಗೆ ಒಟ್ಟು 4 ತಿಂಗಳ ವೇತನ ಭರಿಸಲು ಇದರಿಂದ ಅನುಕೂಲವಾದಂತಾಗಿದೆ ಎಂದು ಹೇಳಿದ್ದಾರೆ.
ಸಾರಿಗೆ ಸಂಸ್ಥೆ ಸಿಬ್ಬಂದಿಗಳ ಸಂಕಷ್ಟಕ್ಕೆ ಸ್ಪಂದಿಸಿ ಕೂಡಲೇ ಅಗತ್ಯ ವೇತನ ಬಿಡುಗಡೆ ಮಾಡಬೇಕೆಂಬ ಬೇಡಿಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಧನ್ಯವಾದ ಹೇಳಿದ್ದಾರೆ.