ಬೆಳಗಾವಿ ತಾಲೂಕಿನ ಪೀರನವಾಡಿ ನಾಕಾ ಬಳಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದೆ.
ರಾಯಣ್ಣನ ಅಭಿಮಾನಿಗಳು ಗುರುತಿಸಿದ ಜಾಗದಲ್ಲಿಯೇ 5 ಅಡಿ ಎತ್ತರದ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಇದೇ ವಿಚಾರವಾಗಿ ನಿನ್ನೆ ಬೆಳಗಾವಿಯಲ್ಲಿ ಧರಣಿ ನಡೆಸಲಾಗಿತ್ತು. ಆಗಸ್ಟ್ 30 ರ ವರೆಗೆ ಸಚಿವ ರಮೇಶ್ ಜಾರಕಿಹೊಳಿ ಕಾಲಾವಕಾಶ ಹೇಳಿ ಕಾನೂನುಬದ್ಧವಾಗಿ ವಿವಾದ ಇತ್ಯರ್ಥ ಪಡಿಸುವ ಭರವಸೆ ನೀಡಿದ್ದರು. ಇದರ ನಡುವೆಯೇ ಮಧ್ಯರಾತ್ರಿ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಏಕಾಏಕಿ ಪ್ರತಿಮೆ ಪ್ರತಿಷ್ಠಾಪನೆ ಮಾಡಿರುವುದಕ್ಕೆ ಮರಾಠಿ ಭಾಷಿಕರಿಂದ ವಿರೋಧ ವ್ಯಕ್ತವಾಗಿದ್ದು, ಸ್ಥಳಕ್ಕೆ ಆಗಮಿಸಿ ಪೊಲೀಸರಿಗೆ ಪ್ರಶ್ನಿಸಿದ್ದಾರೆ ಎಂದು ಹೇಳಲಾಗಿದೆ.