ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಅಪಾಯ ಹೆಚ್ಚಿದೆ ಎಂದು ತಾಂತ್ರಿಕ ಸಲಹಾ ಸಮಿತಿ ನೀಡಿದ ವರದಿಯನ್ನ ಆಧರಿಸಿ 30 ಜಿಲ್ಲೆಗಳಲ್ಲಿ ಮಕ್ಕಳಿಗೆ ಕೋವಿಡ್ ಕೇರ್ ಸೆಂಟರ್ ತೆರೆಯಲು ಈಗಾಗಲೇ ನಿರ್ಧರಿಸಿದ್ದೇವೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿಕೆ ನೀಡಿದ್ರು.
ಚಿಕ್ಕೋಡಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು ಕೋವಿಡ್ ಕೇರ್ ಸೆಂಟರ್ಗಳನ್ನ ತೆರೆಯಲು ಈಗಾಗಲೇ ಮೊರಾರ್ಜಿ ದೇಸಾಯಿ ಹಾಗೂ ಕಿತ್ತೂರು ಚೆನ್ನಮ್ಮ ಶಾಲೆಗಳನ್ನ ಗುರುತಿಸಲಾಗಿದೆ. ಮಂಡ್ಯ ಹಾಗೂ ಚಾಮರಾಜನಗರದಲ್ಲಿ ತಂದೆ ತಾಯಿ ಕೋವಿಡ್ನಿಂದ ಮೃತರಾದ ಹಿನ್ನೆಲೆ ಮಕ್ಕಳು ಅನಾಥವಾಗಿದ್ದಾರೆ. ಇಬ್ಬರು ಮಕ್ಕಳ ಭವಿಷ್ಯಕ್ಕೆ ಏನು ಮಾಡಬೇಕು ಅನ್ನೋದ್ರ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಸಿದ್ದೇವೆ. ಮಕ್ಕಳಿಗೆ ಶಾಶ್ವತ ಪರಿಹಾರ ನೀಡುವ ಬಗ್ಗೆ ನಾನು ಸಿಎಂ ಬಳಿ ಮಾತನಾಡಿದ್ದೇನೆ. ಸಿಎಂ ಕೂಡ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ. ಆ ಮಕ್ಕಳನ್ನ ಪೋಷಿಸಲು ಇಚ್ಚಿಸುವವರಿಗೆ ಸರ್ಕಾರದಿಂದಲೂ ನೆರವು ಸಿಗಲಿದೆ ಎಂದು ಹೇಳಿದರು.
ಅಲ್ಲದೇ ಮಕ್ಕಳ ದತ್ತು ವಿಚಾರದಲ್ಲಿ ಈಗಾಗಲೇ ವಾಟ್ಸಾಪ್ ಹಾಗೂ ಫೇಸ್ಬುಕ್ನಲ್ಲಿ ನಕಲಿ ಸುದ್ದಿ ಹರಿದಾಡುತ್ತಿದೆ. ಮಕ್ಕಳ ದತ್ತು ವಿಚಾರದಲ್ಲಿ ಈ ಸಂಖ್ಯೆಗೆ ಕರೆ ಮಾಡಿ ಮೋಸ ಹೋಗಬೇಡಿ. ಇಲಾಖೆ ಅಧಿಕೃತ ಸಹಾಯವಾಣಿ ಸಂಖ್ಯೆ 1098ಗೆ ಕರೆ ಮಾಡಿ ಎಂದು ಶಶಿಕಲಾ ಜೊಲ್ಲೆ ಮನವಿ ಮಾಡಿದ್ರು.