alex Certify BIG NEWS: ಸ್ಮಶಾನದಲ್ಲಿ ಸತೀಶ್ ಜಾರಕಿಹೊಳಿ ಕಾರ್ ಸಂಚಾರ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸ್ಮಶಾನದಲ್ಲಿ ಸತೀಶ್ ಜಾರಕಿಹೊಳಿ ಕಾರ್ ಸಂಚಾರ ಆರಂಭ

ಬೆಳಗಾವಿ: ಸಾಮಾನ್ಯವಾಗಿ ಹೊಸದಾಗಿ ಖರೀದಿಸಿದ ಕಾರ್ ಗಳನ್ನು ದೇವಾಲಯದಲ್ಲಿ ಪೂಜೆ ಮಾಡಿಸುವ ಪರಿಪಾಟವಿದೆ. ಆದರೆ ಮೂಢನಂಬಿಕೆ ವಿರುದ್ಧ ಜಾಗೃತಿ ಮೂಡಿಸುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸ್ಮಶಾನದಲ್ಲಿ ಕಾರ್ ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ.

ಸತೀಶ್ ಜಾರಕಿಹೊಳಿ ಹೊಸದಾಗಿ ಫಾರ್ಚುನರ್ ಕಾರ್ ಖರೀದಿಸಿದ್ದು, ಸದಾಶಿವನಗರದ ಸ್ಮಶಾನದಲ್ಲಿ ಜುಲೈ 13 ರಂದು ಬೆಳಗ್ಗೆ 11 ಗಂಟೆಗೆ ಕಾರ್ ಗೆ ಚಾಲನೆ ನೀಡಲಾಗುವುದು.

ನಿಜಗುಣಾನಂದ ಸ್ವಾಮೀಜಿ, ಪ್ರಭು ಚನ್ನಬಸವ ಸ್ವಾಮೀಜಿ ಸೇರಿದಂತೆ 10ಕ್ಕಿಂತ ಹೆಚ್ಚು ಸ್ವಾಮೀಜಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಜಾಲತಾಣಗಳ ಮೂಲಕ ನೇರಪ್ರಸಾರ ವ್ಯವಸ್ಥೆ ಮಾಡಲಾಗಿದೆ. ಮೌಢ್ಯ ವಿರೋಧಿ ಕಾರ್ಯಕ್ರಮದ ಭಾಗವಾಗಿ ಸ್ಮಶಾನದಲ್ಲಿ ಕಾರ್ ಕಾರ್ಯಾರಂಭಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...