
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಅಕ್ಟೋಬರ್ 16 ರವರೆಗೆ ದಾಖಲಾತಿಗೆ ಅವಕಾಶ ನೀಡಲಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ 2020 -21 ನೇ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ದಾಖಲಾತಿಗೆ ನೀಡಿದ್ದ ಕಾಲಾವಕಾಶವನ್ನು ಅಕ್ಟೋಬರ್ 16 ರ ವರೆಗೆ ವಿಸ್ತರಿಸಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ದಾಖಲಾತಿಯನ್ನು ಸೆಪ್ಟೆಂಬರ್ 30ರ ವರೆಗೆ ಪೂರ್ಣಗೊಳಿಸಲು ಅವಕಾಶ ನೀಡಲಾಗಿತ್ತು.
ಕೊರೋನಾ ಕಾರಣದಿಂದಾಗಿ ದಾಖಲಾತಿ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳು ದಾಖಲಾತಿ ಅವಧಿ ವಿಸ್ತರಿಸಬೇಕೆಂದು ಮನವಿ ಮಾಡಿದ್ದವು. ಅಂತೆಯೇ ಅಕ್ಟೋಬರ್ 16 ವರೆಗೆ ದಾಖಲಾತಿಗೆ ಅವಕಾಶ ನೀಡಲಾಗಿದೆ.