ಬೆಂಗಳೂರು: ನವೆಂಬರ್ ನಲ್ಲಿ ಕಾಲೇಜು ಪುನಾರಂಭಕ್ಕೆ ಯುಜಿಸಿ ಗ್ರೀನ್ ಸಿಗ್ನಲ್ ನೀಡಿದ್ದು ಸರ್ಕಾರದಿಂದಲೂ ಕಾಲೇಜು ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಹಂತಹಂತವಾಗಿ ಕಾಲೇಜು ಪುನರಾರಂಭಿಸಲು ಸರ್ಕಾರ ಅನುಮತಿ ನೀಡಿದ್ದು ಇದರ ಬೆನ್ನಲ್ಲೇ ಯುಜಿಸಿ ನವೆಂಬರ್ ನಲ್ಲಿ ಕಾಲೇಜು ಆರಂಭಕ್ಕೆ ಸೂಚಿಸಿದೆ. ಆರಂಭಿಕ ಹಂತದಲ್ಲಿ ಪದವಿ ಕಾಲೇಜು ತೆರೆಯಲಿವೆ. ನಂತರದಲ್ಲಿ 8 ರಿಂದ 12 ತರಗತಿ ಆರಂಭವಾಗಲಿದ್ದು, ಅದಾದ ಬಳಿಕ 1 ರಿಂದ 7 ನೇ ತರಗತಿಗಳನ್ನು ಆರಂಭಿಸಲು ತಿಳಿಸಲಾಗಿದೆ.
ಕೊರೋನಾ ತಡೆ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಕಾಲೇಜು, ಶಾಲೆ ಆರಂಭಿಸಲು ಸಿದ್ಧತೆ ನಡೆಸಲಾಗುತ್ತಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು, ತಜ್ಞರು, ಆರೋಗ್ಯ ಕ್ಷೇತ್ರದ ತಜ್ಞರೊಂದಿಗೆ ಮುಖ್ಯಮಂತ್ರಿ ಸಭೆ ನಡೆಸಿ ಬಳಿಕ ಕಾಲೇಜು, ಶಾಲೆಗಳನ್ನು ಆರಂಭಿಸುವ ಕುರಿತಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.