ಬೆಂಗಳೂರು: ಕೊರೋನಾ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಲೆ, ಕಾಲೇಜು ಪ್ರಾರಂಭಿಸುವ ಕುರಿತು ಸಿದ್ಧತೆ ನಡೆಸಲಾಗಿದೆ.
ಈಗಾಗಲೇ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದ್ದು, ಪದವಿಪೂರ್ವ ಕಾಲೇಜು ಮತ್ತು ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ನವೆಂಬರ್ 4 ರಿಂದ 6 ರವರೆಗೆ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಪೋಷಕರೊಂದಿಗೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ.
ನವೆಂಬರ್ 6 ರಂದು ಶಾಲೆಗಳನ್ನು ಆರಂಭಿಸುವ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಶಾಲೆಗಳಲ್ಲಿ ಮೂಲಸೌಕರ್ಯ ಸೇರಿದಂತೆ ಪುನಾರಂಭಕ್ಕೆ ಸಿದ್ಧತೆ ಪೂರ್ಣಗೊಳಿಸಿರುವ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಬಳಿಕ ಶಾಲೆ ಆರಂಭದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎನ್ನಲಾಗಿದೆ.