ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆ ತೆರೆಯಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.
ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಶಾಲೆ ಆರಂಭಿಸಲು ಚಿಂತನೆ ನಡೆಸಲಾಗಿದ್ದು ನವೆಂಬರ್ 2 ರಿಂದ ಅಧಿಕಾರಿಗಳು ಅಭಿಪ್ರಾಯ ಸಂಗ್ರಹಿಸಲಿದ್ದಾರೆ ಎನ್ನಲಾಗಿದೆ.
ನವೆಂಬರ್ 17 ರಿಂದ ಪದವಿ, ಸ್ನಾತಕೋತ್ತರ ಪದವಿ ಸೇರಿ ವಿವಿಧ ಕಾಲೇಜುಗಳ ಆರಂಭಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಅದೇ ಶಾಲೆಗಳ ಆರಂಭಕ್ಕೆ ಚಿಂತನೆ ನಡೆದಿದ್ದು ಮೊದಲಿಗೆ ಅಭಿಪ್ರಾಯ ಸಂಗ್ರಹಿಸಲಾಗುವುದು. ನಂತರದಲ್ಲಿ ಶಾಲೆ ಆರಮಭಿಸುವ ಬಗ್ಗೆ ತೀರ್ಮಾನಿಸಲಾಗುವುದು ಎನ್ನಲಾಗಿದೆ.
ಶಿಕ್ಷಣ ಇಲಾಖೆಯ ಆಯುಕ್ತ ಅನ್ಬುಕುಮಾರ್ ಅಧ್ಯಕ್ಷತೆಯಲ್ಲಿ ನವೆಂಬರ್ 2 ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಯಲಿದ್ದು, ಶಾಲೆ ಆರಂಭಿಸುವ ಕುರಿತಾಗಿ ಚರ್ಚೆ ನಡೆಸಲಾಗುವುದು ಎಂದು ಹೇಳಲಾಗಿದೆ.