alex Certify BIG NEWS: ಕೊರೊನಾ ಇಳಿಕೆ, ನ.17 ರಿಂದ ಕಾಲೇಜ್ ಆರಂಭದ ಬಳಿಕ ಶಾಲೆ ತೆರೆಯಲು ಚಿಂತನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಇಳಿಕೆ, ನ.17 ರಿಂದ ಕಾಲೇಜ್ ಆರಂಭದ ಬಳಿಕ ಶಾಲೆ ತೆರೆಯಲು ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆ ತೆರೆಯಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.

ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಶಾಲೆ ಆರಂಭಿಸಲು ಚಿಂತನೆ ನಡೆಸಲಾಗಿದ್ದು ನವೆಂಬರ್ 2 ರಿಂದ ಅಧಿಕಾರಿಗಳು ಅಭಿಪ್ರಾಯ ಸಂಗ್ರಹಿಸಲಿದ್ದಾರೆ ಎನ್ನಲಾಗಿದೆ.

ನವೆಂಬರ್ 17 ರಿಂದ ಪದವಿ, ಸ್ನಾತಕೋತ್ತರ ಪದವಿ ಸೇರಿ ವಿವಿಧ ಕಾಲೇಜುಗಳ ಆರಂಭಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಅದೇ ಶಾಲೆಗಳ ಆರಂಭಕ್ಕೆ ಚಿಂತನೆ ನಡೆದಿದ್ದು ಮೊದಲಿಗೆ ಅಭಿಪ್ರಾಯ ಸಂಗ್ರಹಿಸಲಾಗುವುದು. ನಂತರದಲ್ಲಿ ಶಾಲೆ ಆರಮಭಿಸುವ ಬಗ್ಗೆ ತೀರ್ಮಾನಿಸಲಾಗುವುದು ಎನ್ನಲಾಗಿದೆ.

ಶಿಕ್ಷಣ ಇಲಾಖೆಯ ಆಯುಕ್ತ ಅನ್ಬುಕುಮಾರ್ ಅಧ್ಯಕ್ಷತೆಯಲ್ಲಿ ನವೆಂಬರ್ 2 ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಯಲಿದ್ದು, ಶಾಲೆ ಆರಂಭಿಸುವ ಕುರಿತಾಗಿ ಚರ್ಚೆ ನಡೆಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...