ಬೆಂಗಳೂರು: ಕೇಂದ್ರ ಸರ್ಕಾರ ಶಾಲೆಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿರುವ ಹಿನ್ನೆಲೆಯಲ್ಲಿ ಇವತ್ತು ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಕಾರ್ಯಪಡೆ ಸದಸ್ಯರ ಮಹತ್ವದ ಸಭೆ ನಡೆಯಲಿದೆ.
ರಾಜ್ಯದಲ್ಲಿ ಶಾಲೆ ಆರಂಭಿಸುವ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಆರೋಗ್ಯ ಸಚಿವ ಬಿ. ಶ್ರೀರಾಮುಲು ನಡೆಸಲಿರುವ ಸಭೆಯಲ್ಲಿ ಸುರಕ್ಷತೆಯೊಂದಿಗೆ ಶಾಲೆಗಳನ್ನು ಆರಂಭಿಸುವ ಕುರಿತಾಗಿ ಚರ್ಚೆ ನಡೆಸಲಾಗುತ್ತದೆ.
ಕೇಂದ್ರ ಸರ್ಕಾರ ಅಕ್ಟೋಬರ್ 15ರ ನಂತರ ಶಾಲೆಗಳ ಆರಂಭಕ್ಕೆ ಮಾರ್ಗಸೂಚಿ ಬಿಡುಗಡೆಮಾಡಿದೆ. ಶಿಕ್ಷಣ ಇಲಾಖೆ ಕಾರ್ಯಸೂಚಿ ವಿಧಾನ ಸಿದ್ಧಪಡಿಸಿದೆ. ಕೊರೋನಾ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮತ್ತು ಕಾರ್ಯಪಡೆಯ ಅನುಮೋದನೆಯೊಂದಿಗೆ ಸುರಕ್ಷಿತವಾಗಿ ಶಾಲೆಗಳನ್ನು ಆರಂಭಿಸುವ ಕುರಿತಂತೆ ಚರ್ಚೆ ನಡೆಸಲಾಗುವುದು. ಕೊರೋನಾ ಸೋಂಕು ತಗುಲಿ ಹೋಂ ಕ್ವಾರಂಟೈನ್ ನಲ್ಲಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿಡಿಯೋ ಸಂವಾದದ ಮೂಲಕ ಸಭೆಯಲ್ಲಿ ಭಾಗವಹಿಸಬಹುದೆಂದು ಹೇಳಲಾಗಿದೆ. ಕೊರೋನಾ ಸೋಂಕು ಹೆಚ್ಚಾಗುತ್ತಲೇ ಇರುವುದರಿಂದ ಸದ್ಯಕ್ಕೆ ಶಾಲೆ ಆರಂಭ ಮಾಡುವ ಸಾಧ್ಯತೆ ಇಲ್ಲವೆನ್ನಲಾಗಿದೆ.