alex Certify BIG NEWS: ಶಾಲೆ ಆರಂಭದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಲೆ ಆರಂಭದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಶಾಲೆಗಳ ಆರಂಭಕ್ಕೆ ಸರ್ಕಾರ ಸಿದ್ಧತೆ ಕೈಗೊಂಡಿದೆ. ಜುಲೈ 1 ರಂದು 4 ರಿಂದ 7ನೇ ತರಗತಿ ಶಾಲೆಗಳನ್ನು ಆರಂಭಿಸಲಾಗುವುದು.

ಜುಲೈ 15 ರಂದು 1 ರಿಂದ 3 ನೇ ತರಗತಿ ಮತ್ತು 8 -10 ನೇ ತರಗತಿಗಳನ್ನು ಆರಂಭಿಸುವ ಸಾಧ್ಯತೆಯಿದೆ. ಜುಲೈ 20 ರ ನಂತರ ಪ್ರಿಸ್ಕೂಲ್ ತರಗತಿಗಳು ಆರಂಭವಾಗಲಿದ್ದು, ಜೂನ್ 10 ರಿಂದ ಪೋಷಕರ ಸಭೆ ನಡೆಸಿ ಶಾಲೆ ಆರಂಭದ ದಿನಾಂಕವನ್ನು ಪ್ರಕಟಿಸಲಾಗುವುದು.

ಜುಲೈ 1 ರಿಂದ 20 ರವರೆಗೆ ಮೂರು ಹಂತಗಳಲ್ಲಿ ಶಾಲೆಗಳನ್ನು ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪಾಳಿಯಲ್ಲಿ ತರಗತಿ ನಡೆಸುವ ಸಾಧ್ಯತೆ ಇದೆ. ಮೊದಲಿಗೆ ಪೋಷಕರ ಸಭೆಯಲ್ಲಿ ಚರ್ಚೆ ನಡೆಸಿ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

ಜೂನ್ 10 ರಿಂದ 12 ರವರೆಗೆ ಶಾಲಾ ಆಡಳಿತ ಮಂಡಳಿ ಮತ್ತು ಪೋಷಕರ ಸಭೆ ನಡೆಸಿ ಶಾಲೆ ಆರಂಭದ ಬಗ್ಗೆ ಅಭಿಪ್ರಾಯಗಳನ್ನು ತಿಳಿಸಲು ಕೋರಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...