ಬೆಂಗಳೂರು: ಜುಲೈನಲ್ಲಿ ಯಾವುದೇ ಕಾರಣಕ್ಕೂ ಶಾಲೆ ಆರಂಭಿಸುವುದಿಲ್ಲ. ಆಗಸ್ಟ್ 15 ರ ನಂತರ ಶಾಲೆಗಳನ್ನು ಆರಂಭಿಸಲಾಗುವುದು.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಕುರಿತು ಮಾತನಾಡಿ, ರಾಜ್ಯದಲ್ಲಿ ಯಾವುದೇ ಕಾರಣಕ್ಕೆ ಜುಲೈನಲ್ಲಿ ಶಾಲೆಗಳನ್ನು ಆರಂಭಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಆಗಸ್ಟ್ 15 ರ ಬಳಿಕ ಶಾಲೆ ಆರಂಭಿಸುವ ಸೂಚನೆ ನೀಡಿದ್ದು ರಾಜ್ಯದಲ್ಲಿ ಆಗಸ್ಟ್ 15 ರ ನಂತರವೇ ಶಾಲೆ ಆರಂಭಕ್ಕೆ ಚಿಂತನೆ ನಡೆಸಲಾಗಿದೆ. ಪೋಷಕರು, ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಮಕ್ಕಳ ಹಿತದೃಷ್ಠಿಯಿಂದ ಆರೋಗ್ಯ ಇಲಾಖೆ, ಶಿಕ್ಷಣ ತಜ್ಞರು, ಪೋಷಕರು, ಶಿಕ್ಷಣ ಸಂಸ್ಥೆಗಳ ಅಭಿಪ್ರಾಯ, ಸಲಹೆಗಳನ್ನು ಪಡೆದ ನಂತರವೇ ಶಾಲೆಗಳನ್ನು ಆರಂಭಿಸಲಾಗುತ್ತದೆ. ತರಾತುರಿಯಲ್ಲಿ ಶಾಲೆಗಳನ್ನು ಆರಂಭಿಸುವುದಿಲ್ಲ ಎಂದು ಹೇಳಿದ್ದಾರೆ.