ಶಾಲೆ ಆರಂಭಿಸುವ ಕುರಿತಾದ ಊಹಾಪೋಹಕ್ಕೆ ಕಿವಿಗೊಡಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ವದಂತಿಗಳಿಗೆ ಕಿವಿಗೊಡಬಾರದು ಎಂದು ಪೋಷಕರಿಗೆ ಮನವಿ ಮಾಡಿದ್ದಾರೆ.
ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭಿಸುವ ಮೊದಲು ಎಲ್ಲಾ ಪಕ್ಷದ ಮುಖಂಡರು, ತಜ್ಞರು, ಹಿರಿಯ ಅಧಿಕಾರಿಗಳ ಸಭೆ ಕರೆದು ಸಾಧಕ ಬಾಧಕ ಚರ್ಚಿಸಿ ಶಾಲೆ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಸಭೆ ನಂತರದಲ್ಲಿ ಶಾಲೆ ಪ್ರಾರಂಭಿಸುವ ಕುರಿತಂತೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸ್ಪಷ್ಟನೆ ನೀಡಿದ್ದಾರೆ.