ಬೆಂಗಳೂರು: ಆರ್.ಟಿ.ಇ. ಪ್ರವೇಶದಡಿ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ.
ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯ್ದೆ ಅನ್ವಯ 2020 -21 ನೇ ಸಾಲಿಗೆ ಅನುದಾನರಹಿತ ಮತ್ತು ಅನುದಾನಿತ ಶಾಲೆಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಜೂನ್ 24 ಕೊನೆಯ ದಿನವಾಗಿತ್ತು. ಇದನ್ನು ಜುಲೈ 8 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಸಂಖ್ಯೆಯ ಪೋಷಕರು ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಅವಧಿಯನ್ನು ವಿಸ್ತರಿಸಲಾಗಿದೆ. ಮಾಹಿತಿಗಾಗಿ www.schooleducation.kar.nic.in ಸಂಪರ್ಕಿಸಬಹುದಾಗಿದೆ ಎಂದು ಹೇಳಲಾಗಿದೆ.