ಅನ್ಲಾಕ್ ಮಾರ್ಗಸೂಚಿ ಅನ್ವಯ ಶಾಲೆಗಳಿಗೆ ವಿದ್ಯಾರ್ಥಿಗಳು ಭೇಟಿ ನೀಡಿ ಶಿಕ್ಷಕರಿಂದ ಮಾರ್ಗದರ್ಶನ ಪಡೆಯಲು ಅವಕಾಶ ಇರುವುದರಿಂದ ಶಾಲೆಗಳಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
9 ರಿಂದ 12 ನೇ ತರಗತಿ ವಿದ್ಯಾರ್ಥಿಗಳು ಶಾಲೆಗೆ ಪೋಷಕರ ಅನುಮತಿಯೊಂದಿಗೆ ಹೋಗಿ ಬರಲು ಅವಕಾಶ ನೀಡಲಾಗಿದೆ. ಸೆಪ್ಟೆಂಬರ್ 21 ರಿಂದ 9 ರಿಂದ 12ನೇ ತರಗತಿ ವಿದ್ಯಾರ್ಥಿಗಳು ಶಾಲೆಗೆ ಭೇಟಿ ನೀಡಲು ಮತ್ತು ಶಿಕ್ಷಕರ ಮಾರ್ಗದರ್ಶನ ಪಡೆಯಲು ಅವಕಾಶ ನೀಡಿರುವುದರಿಂದ ಶಾಲೆಗಳಲ್ಲಿ ಅಗತ್ಯ ಸಿದ್ಧತೆ ನಡೆಸಲಾಗಿದೆ.
ಈಗಾಗಲೇ ಶಿಕ್ಷಣ ಇಲಾಖೆಯ ವಿದ್ಯಾಗಮ ಯೋಜನೆಯಡಿ ಮಕ್ಕಳು ಇರುವ ಸ್ಥಳಕ್ಕೆ ಹೋಗಿ ಶಿಕ್ಷಕರು ಪಾಠ ಮಾಡುತ್ತಿದ್ದಾರೆ. ಶಾಲೆಗಳಿಗೆ ವಿದ್ಯಾರ್ಥಿಗಳ ಭೇಟಿ ಸಮಯದಲ್ಲಿ ಮಾರ್ಗದರ್ಶನ ನೀಡಲು ಎಷ್ಟು ಜನ ಶಿಕ್ಷಕರು ಇರಬೇಕು ಎಂಬ ಬಗ್ಗೆ ನಿಯಮ ರೂಪಿಸಲಾಗುವುದು. ವಿದ್ಯಾರ್ಥಿಗಳ ಭೇಟಿಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಹೇಳಲಾಗಿದೆ.