ಬೆಂಗಳೂರು: ರಾಜ್ಯದ ಕರಾವಳಿ ಪ್ರದೇಶ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜುಲೈ 12 ರಿಂದ 16 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.
13 ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಶಿವಮೊಗ್ಗ, ರಾಮನಗರ, ತುಮಕೂರು, ಕೋಲಾರ, ಹಾಸನ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾನುವಾರ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಸೋಮವಾರದಿಂದ ಕರಾವಳಿ ಪ್ರದೇಶದಲ್ಲಿ ಮಳೆ ಹೆಚ್ಚಾಗಲಿದ್ದು ವೇಗದ ಗಾಳಿ ಬೀಸುತ್ತಿರುವುದರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.