ಕೊರೊನಾ ಸಾಂಕ್ರಾಮಿಕದ ಕಾರಣ ಹಲವಾರು ತಿಂಗಳುಗಳ ಕಾಲ ಶಾಲಾ – ಕಾಲೇಜುಗಳು ಬಂದ್ ಆಗಿದ್ದವು. ಆ ಬಳಿಕ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಲಾಗಿತ್ತು.
2020 – 21ನೇ ಸಾಲಿನ ಶೈಕ್ಷಣಿಕ ತರಗತಿಗಳು ಆರಂಭವಾಗಿದ್ದರೂ ಸಹ ಈಗಾಗಲೇ ವಿಳಂಬವಾಗಿರುವ ಕಾರಣ ಪಾಠ ಪ್ರವಚನಗಳು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಹೀಗಾಗಿ ವಿದ್ಯಾರ್ಥಿ ಜೀವನದ ಮಹತ್ತರ ಘಟ್ಟವಾದ ದ್ವಿತೀಯ ಪಿಯುಸಿ ಪಠ್ಯ ಕಡಿತ ಕುರಿತಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನ ಕೈಗೊಂಡಿದೆ.
ಪ್ರಸಕ್ತ ಸಾಲಿನಲ್ಲಿ ದಾಖಲಾದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪಠ್ಯದಲ್ಲಿ ಶೇಕಡಾ 30 ರಷ್ಟು ಕಡಿತ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಅಲ್ಲದೆ 2021ರ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ಪುನರಾವರ್ತಿತ ಹಾಗೂ ಖಾಸಗಿಯಾಗಿ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳಿಗೂ ಈ ನಿಯಮ ಅನ್ವಯಿಸುತ್ತದೆ ಎಂದು ತಿಳಿಸಲಾಗಿದೆ.