ಬೆಂಗಳೂರು: ಸೆಪ್ಟೆಂಬರ್ 21 ರಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಕಲಾಪ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ. ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.
ಸೆ. 21 ರಿಂದ 30 ರವರೆಗೆ ಬೆಂಗಳೂರಿನಲ್ಲಿ ಮಂಡಲ ಅಧಿವೇಶನ ನಡೆಯಲಿದೆ. ಅಧಿವೇಶನದ ನಡುವೆ ಆರು ತಿಂಗಳಿಗಿಂತ ಹೆಚ್ಚು ಅಂತರ ಇರಬಾರದು ಎಂದು ಹೇಳಿರುವುದರಿಂದ ಸೆಪ್ಟಂಬರ್ ನಾಲ್ಕನೇ ವಾರದೊಳಗೆ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡಲಾಗಿದೆ.