ಬೆಂಗಳೂರು: ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿದೆ.
ಇವರಲ್ಲಿ 89 ಆರೋಪಿಗಳನ್ನು ಬಳ್ಳಾರಿ ಸೆಂಟ್ರಲ್ ಜೈಲ್ ಗೆ ಸ್ಥಳಾಂತರ ಮಾಡಲಾಗಿದೆ. 89 ಆರೋಪಿಗಳಿಗೆ 15 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಹಿನ್ನಲೆಯಲ್ಲಿ ರಾತ್ರೋರಾತ್ರಿ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.
ಬೆಂಗಳೂರಿನಲ್ಲಿ ಆರೋಪಿಗಳನ್ನು ಇರಿಸಿದರೆ ಗಲಾಟೆ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ. ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಸಿಸಿಬಿ ಮತ್ತು ಕೆಎಸ್ಆರ್ಪಿ ಪೊಲೀಸ್ ಭದ್ರತೆಯಲ್ಲಿ ಆರೋಪಿಗಳನ್ನು ಸ್ಥಳಾಂತರ ಮಾಡಲಾಗಿದೆ.