
ತುಮಕೂರು: ಶಿರಾ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಶಿರಾ ಕ್ಷೇತ್ರವನ್ನು ಮಾದರಿ ತಾಲ್ಲೂಕನ್ನಾಗಿ ಮಾಡಲು ಅಗತ್ಯವಾದ ಹಣಕಾಸು ನೆರವು ನೀಡಲಾಗುವುದು. ಚುನಾವಣೆಯಲ್ಲಿ ನೀವು ಬಿಜೆಪಿ ಅಭ್ಯರ್ಥಿಯನ್ನು ಹೆಚ್ಚು ಮತಗಳ ಅಂತರದಿಂದ ಜಯಗಳಿಸಿಕೊಡಬೇಕು ಎಂದು ಮತದಾರರಿಗೆ ಮನವಿ ಮಾಡಿದ್ದಾರೆ.
ಭಾಗ್ಯಲಕ್ಷ್ಮಿ ಯೋಜನೆ, ಬೈಸಿಕಲ್ ವಿತರಣೆ ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಶಿರಾದಲ್ಲಿ ಅಭಿವೃದ್ಧಿಗೆ ಆಗಬೇಕಾದ ಕೆಲಸ ಮಾಡಿಕೊಟ್ಟಿದ್ದೇನೆ. ರೈತರ ಬೆಳೆಗೆ ವೈಜ್ಞಾನಿಕ ಬೆಲೆ, ಕಾಡುಗೊಲ್ಲ ಅಭಿವೃದ್ಧಿ ನಿಗಮ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ ಕೊಡಬೇಕು ಎಂದು ಮನವಿ ಮಾಡಿದ್ದಾರೆ.