alex Certify ಬಂಧನಕ್ಕೆ ತೆರಳಿದ್ದ PSI, ಪೊಲೀಸ್ ಮೇಲೆ ತೀವ್ರ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಂಧನಕ್ಕೆ ತೆರಳಿದ್ದ PSI, ಪೊಲೀಸ್ ಮೇಲೆ ತೀವ್ರ ಹಲ್ಲೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಕುಂಸಿ ಠಾಣೆಯ ಪಿಎಸ್ಐ ನವೀನ್ ಮಠಪತಿ ಮತ್ತು ಪೊಲೀಸ್ ಕಾನ್ಸ್ ಟೇಬಲ್ ಬಸವಂತಪ್ಪ ಅವರ ಮೇಲೆ ಗಂಭೀರವಾಗಿ ಹಲ್ಲೆ ನಡೆಸಲಾಗಿದೆ.

ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲು ತೆರಳಿದ್ದ ವೇಳೆ ಆರೋಪಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಮಧು ಹಾಗೂ ಮನು ಎಂಬುವರು ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಗಾಂಜಾ ವಶಕ್ಕೆ ಪಡೆದಿದ್ದು ಆರೋಪಿತರನ್ನು ಬಂಧಿಸಲು ಮನೆಗೆ ತೆರಳಿದ್ದ ವೇಳೆ ಮಾರಕಾಸ್ತ್ರದಿಂದ ಪಿಎಸ್ಐ ನವೀನ್ ಮಠಪತಿ ಅವರ ತಲೆಗೆ ಹೊಡೆದಿದ್ದಾರೆ. ಅವರು ಗಂಭೀರವಾಗಿ ಗಾಯಗೊಂಡು ಕೆಳಗೆ ಬೀಳುತ್ತಿದ್ದಂತೆ ರಕ್ಷಣೆಗೆ ಧಾವಿಸಿದ ಪೊಲೀಸ್ ಕಾನ್ಸ್ ಟೇಬಲ್ ಬಸವಂತಪ್ಪ ಮೇಲೆಯೂ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆನ್ನಲಾಗಿದೆ.

ಗಾಯಗೊಂಡ ಇಬ್ಬರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟಕ್ಕೆ ಕಡಿವಾಣ ಹಾಕಲು ಪಿಎಸ್ಐ ನಿರಂತರ ಕಾರ್ಯಾಚರಣೆ ಕೈಗೊಂಡಿದ್ದು ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ಹಲ್ಲೆ ಮಾಡಲಾಗಿದೆ. ಪ್ರಕರಣದ ತನಿಖೆ ಕೈಗೊಳ್ಳಲಾಗಿದ್ದು ಪರಾರಿಯಾಗಿರುವ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...