alex Certify ಹೊರ ರಾಜ್ಯಗಳಿಂದ ಹರಿದು ಬಂದ ನೂರಾರು ಮಂದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊರ ರಾಜ್ಯಗಳಿಂದ ಹರಿದು ಬಂದ ನೂರಾರು ಮಂದಿ

ಶಿವಮೊಗ್ಗ: ಕಳೆದ ಒಂದು ವಾರದ ಅವಧಿಯಲ್ಲಿ ಜಿಲ್ಲೆಗೆ ಹೊರ ರಾಜ್ಯಗಳಿಂದ ಅಗಮಿಸಿರುವ 289 ಮಂದಿಯ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಕ್ವಾರೆಂಟೈನ್‍ಗೆ ಒಳಪಡಿಸಲಾಗಿದೆ.

ಇವರ ಪೈಕಿ ಕಳೆದ ಎರಡು ದಿನಗಳಲ್ಲಿ ವಿವಿಧ 7ರಾಜ್ಯಗಳಿಂದ ಒಟ್ಟು 148 ಮಂದಿ ಜಿಲ್ಲೆಗೆ ಆಗಮಿಸಿದ್ದಾರೆ. ಇವರಲ್ಲಿ ತೆಲಂಗಾಣದಿಂದ 13, ಕೇರಳದಿಂದ 2, ಗೋವಾದಿಂದ 73, ಮಹಾರಾಷ್ಟ್ರ 12, ತಮಿಳುನಾಡು 23, ರಾಜಸ್ತಾನ 16, ಗುಜರಾತ್ ನ 9ಮಂದಿ ಇದ್ದಾರೆ.

ಜಿಲ್ಲೆಗೆ ಆಗಮಿಸುವ ಪ್ರತಿಯೊಬ್ಬರನ್ನೂ ಕುವೆಂಪು ವಿಶ್ವವಿದ್ಯಾಲಯದ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಸಮಗ್ರವಾಗಿ ಆರೋಗ್ಯ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಅತಿ ಹೆಚ್ಚಿನ ಕೊರೋನಾ ಪ್ರಕರಣಗಳು ಕಂಡು ಬಂದಿರುವ ಹೈರಿಸ್ಕ್ ರಾಜ್ಯಗಳಿಂದ ಅಗಮಿಸಿರುವವರನ್ನು ಸಾಂಸ್ಥಿಕ ಕ್ವಾರೆಂಟೈನ್‍ಗೆ ಒಳಪಡಿಸಲಾಗುತ್ತಿದೆ.

ಇನ್ನುಳಿದ ರಾಜ್ಯಗಳಿಂದ ಆಗಮಿಸಿದವರನ್ನು ಹೋಂ ಕ್ವಾರೆಂಟೈನ್‍ಗೆ ಕಳುಹಿಸಲಾಗಿದ್ದು, ಪ್ರತಿಯೊಬ್ಬರ ಮೇಲೆ ನಿರಂತರ ನಿಗಾ ಇರಿಸಲಾಗುತ್ತಿದೆ

ಎಚ್ಚರಿಕೆ: ಹೊರ ರಾಜ್ಯಗಳಿಂದ ಆಗಮಿಸಿರುವವರನ್ನು ಸೂಕ್ತ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಕ್ವಾರೆಂಟೈನ್‍ಗೆ ಒಳಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಅವರ ಆರೋಗ್ಯ ಪರಿಸ್ಥಿತಿಯ ಮೇಲೆ ನಿರಂತರ ನಿಗಾ ಇರಿಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಬೇರೆ ರಾಜ್ಯಗಳಿಂದ ಅಗಮಿಸಿರುವವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಗೊಂದಲವನ್ನು ಹುಟ್ಟಿಸುವಂತಹ, ಸಮಾಜದಲ್ಲಿ ಒಡಕನ್ನು ಉಂಟು ಮಾಡುವಂತಹ, ವದಂತಿಗಳನ್ನು ಹರಡುವ ಸಂದೇಶಗಳನ್ನು ಹಾಕುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...