ಶಿವಮೊಗ್ಗ: 7 ಜನ ಮಟ್ಕಾ ಜೂಜಾಟ ಆರೋಪಿತರನ್ನು ಬಂಧಿಸಲಾಗಿದ್ದು, ಪ್ರತ್ಯೇಕ 7 ಪ್ರಕರಣಗಳು ದಾಖಲಿಸಲಾಗಿದ್ದು, 16,530 ರೂ. ನಗದು ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗ, ಭದ್ರಾವತಿ ಹಾಗೂ ಶಿಕಾರಿಪುರ ಉಪ ವಿಭಾಗ ವ್ಯಾಪ್ತಿಗಳಲ್ಲಿ ಆರೋಪಿತರು ಕಾನೂನು ಬಾಹಿರವಾಗಿ ಮಟ್ಕಾ ಜೂಜಾಟ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಸಂಬಂಧಪಟ್ಟ ಪೊಲೀಸ್ ಠಾಣೆಗಳ ಪಿಎಸ್ಐಗಳು ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡವನ್ನು ರಚಿಸಿ ಕಾರ್ಯಾಚರಣೆ ನಡೆಸಲಾಗಿದೆ.
ಭದ್ರಾವತಿ ಹಳೆನಗರ ಪೊಲೀಸ್ ಠಾಣೆ ವ್ಯಾಪ್ತಿಯ ಶಿವನಿ ಕ್ರಾಸ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗೌರಾಪುರದ ವಿಜಯ್ ನನ್ನು ಬಂಧಿಸಿ 4540 ರೂ., ಓಸಿ ಚೀಟಿ ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯ ಗಾರ್ಡನ್ ಏರಿಯಾದಲ್ಲಿ ರಾಗಿಗುಡ್ಡದ ಶಫಿವುಲ್ಲಾ ಖಾನ್(55) ಎಂಬುವನನ್ನು ಬಂಧಿಸಿ 1740 ರೂ. ಓಸಿ ಚೀಟಿ ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇರ್ಫಾನ್(32) ಭದ್ರಾವತಿ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನಿಲ್ ಕುಮಾರ್(44) ಎಂಬುವವರನ್ನು ಬಂಧಿಸಲಾಗಿದೆ.
ಶಿವಮೊಗ್ಗ ಗ್ರಾಮಾಂತರ ಠಾಣೆ, ಶಿಕಾರಿಪುರ ಟೌನ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಹಲವರನ್ನು ಬಂಧಿಸಿದ್ದು ಕೇಸ್ ದಾಖಲಿಸಿಕೊಂಡಿದ್ದಾರೆ.