ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡರನ್ನು ಪೋಲಿಸರು ಬಂಧಿಸಿದ್ದಾರೆ.
ಶಿವಮೊಗ್ಗ ಮಹಾನಗರ ಪಾಲಿಕೆ ಮಾಜಿ ಸದಸ್ಯ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದೀಪಕ್ ಸಿಂಗ್ ಸಾಮಾಜಿಕ ಜಾಲ ತಾಣ ಫೇಸ್ ಬುಕ್ ನಲ್ಲಿ ಮೋದಿ ಕುರಿತಾಗಿ ಅವಹೇಳನಕಾರಿ ಬರಹ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ದೂರು ನೀಡಿದ್ದಾರೆ.
ಈ ದೂರಿನ ಅನ್ವಯ ಪರಿಶೀಲನೆ ನಡೆಸಿದ ವಿನೋಬನಗರ ಠಾಣೆ ಪೊಲೀಸರು ದೀಪಕ್ ಸಿಂಗ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಳಿಕ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗಿದೆ.