
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಗ್ರಾಮವೊಂದರಲ್ಲಿ ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
22 ವರ್ಷದ ನಾಗರಾಜ್ ಅತ್ಯಾಚಾರ ಎಸಗಿದ ಆರೋಪಿ ಎನ್ನಲಾಗಿದೆ. ಸಂಬಂಧಿಯಾಗಿದ್ದ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ನಿರಂತರ ಅತ್ಯಾಚಾರ ಎಸಗಿದ್ದ ನಾಗರಾಜ ಈ ವಿಚಾರವನ್ನು ಪೋಷಕರಿಗೆ ಹೇಳಿದರೆ ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ.
ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.