alex Certify ಮನೆಯಂಗಳದಲ್ಲಿ ಆಟವಾಡುವಾಗಲೇ ನಡೆದಿದೆ ಆಘಾತಕಾರಿ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಂಗಳದಲ್ಲಿ ಆಟವಾಡುವಾಗಲೇ ನಡೆದಿದೆ ಆಘಾತಕಾರಿ ಘಟನೆ

ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಹರತಾಳು ಗ್ರಾಮದಲ್ಲಿ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿ ಹಾವು ಕಚ್ಚಿ ಮೃತಪಟ್ಟಿದ್ದಾಳೆ.

7 ವರ್ಷದ ವಿನುತಾ ಮೃತಪಟ್ಟ ಬಾಲಕಿ ಎಂದು ಹೇಳಲಾಗಿದೆ. ಮನೆಯಂಗಳದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಹಾವು ಕಚ್ಚಿ ಅಸ್ವಸ್ಥಳಾಗಿದ್ದು ಕೂಡಲೇ ಪೋಷಕರು ಸಾಗರ ತಾಲ್ಲೂಕಿನ ನರಸೀಪುರಕ್ಕೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆಗಾಗಲೇ ಬಾಲಕಿ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದು ನಂತರ ಆನಂದಪುರಂ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿದೆ.

ಮರಣೋತ್ತರ ಪರೀಕ್ಷೆ ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ರಿಪ್ಪನ್ ಪೇಟೆಗೆ ತೆಗೆದುಕೊಂಡು ಹೋಗುವಂತೆ ಹೇಳಿದ್ದು ಬಳಿಕ ರಿಪ್ಪನ್ ಪೇಟೆ ಆಸ್ಪತ್ರೆಗೆ ಕರೆತರಲಾಗಿದೆ. ಮರಣೋತ್ತರ ಪರೀಕ್ಷೆಗೆ ಪೊಲೀಸ್ ಅಧಿಕಾರಿಗಳು ವಿಳಂಬ ಮಾಡಿದ್ದಾರೆ ಎಂದು ಅಸಮಾಧಾನಗೊಂಡ ಶಾಸಕ ಹರತಾಳು ಹಾಲಪ್ಪ ಪೊಲೀಸರ ಮೇಲೆ ಹರಿಹಾಯ್ದಿದ್ದಾರೆ. ಬಾಲಕಿಯನ್ನು ಕಳೆದುಕೊಂಡು ಕುಟುಂಬದವರು ನೋವಿನಲ್ಲಿದ್ದರೂ, ವಿಳಂಬ ಮಾಡುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...