alex Certify SHOCKING NEWS: ಇದೆಂಥಾ ಘೋರ ಕೃತ್ಯ – ಕೊರೊನಾ ಸೋಂಕಿತ ಅಣ್ಣನನ್ನೇ ಕೊಚ್ಚಿ ಕೊಂದ ತಮ್ಮ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಇದೆಂಥಾ ಘೋರ ಕೃತ್ಯ – ಕೊರೊನಾ ಸೋಂಕಿತ ಅಣ್ಣನನ್ನೇ ಕೊಚ್ಚಿ ಕೊಂದ ತಮ್ಮ…!

ಚಿಕ್ಕಮಗಳೂರು: ಕೊರೊನಾ ಸೋಂಕು ತಗುಲಿದ್ದ ಅಣ್ಣನನ್ನೇ ತಮ್ಮನೊಬ್ಬ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸಾ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ಮರಸಣಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಹಾವೀರ ತಮ್ಮನಿಂದಲೇ ಹತ್ಯೆಯಾದ ಸೋಂಕಿತ. ಕೆಲ ದಿನಗಳ ಹಿಂದೆ ಮಹಾವೀರನಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಇರಲು ಸಾಧ್ಯವೇ ಇಲ್ಲ, ತನ್ನನ್ನು ಡಿಸ್ಚಾರ್ಜ್ ಮಾಡುವಂತೆ ಹೇಳಿ ಪಟ್ಟುಹಿಡಿದು ಡಿಸ್ಚಾರ್ಜ್ ಆಗಿ ಮನೆಗೆ ಬಂದಿದ್ದ.

ಮಹಾವೀರ ಮನೆಗೆ ಬರುತ್ತಿದ್ದಂತೆಯೇ ಅಣ್ಣ-ತಮ್ಮನ ನಡುವೆ ಜಗಳ, ಗಲಾಟೆ ಆರಂಭವಾಗಿದೆ. ಈ ವೇಳೆ ಕೋಪದ ಕೈಗೆ ಬುದ್ಧಿಕೊಟ್ಟ ತಮ್ಮ ಅಣ್ಣ ಮಹಾವೀರನ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...