ಕೊಪ್ಪಳ: ಕೊರೊನಾ ಎರಡನೇ ಅಲೆ ನಡುವೆಯೇ ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಸದ್ದಿಲ್ಲದೇ ಆರಂಭವಾಗಿದೆಯೇ ಎಂಬ ಅನುಮಾನ ಶುರುವಾಗಿದೆ.
ಕೊಪ್ಪಳ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಚಿಕ್ಕ ಮಕ್ಕಳು, ನವಜಾತ ಶಿಶುಗಳು ಕೂಡ ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ.
ಭಾರತದಲ್ಲಿ ತನ್ನ ಸಿಬ್ಬಂದಿಯ ಸುರಕ್ಷತೆ ಬಗ್ಗೆ ʼಟ್ವಿಟರ್ʼ ಆತಂಕ
ಜಿಲ್ಲೆಗಳಲ್ಲಿ ಐವರು ಮಕ್ಕಳು, ಮೂವರು ನವಜಾತ ಶಿಶುಗಳು ಸೇರಿ ಒಟ್ಟು 8 ಮಕ್ಕಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಹೆಚ್ ಎಫ್ ಎನ್ ಸಿ ಬೆಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇಬ್ಬರು ಮಕ್ಕಳು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ದೇಶದ ಜನತೆಯನ್ನು ಬೆಚ್ಚಿಬೀಳಿಸಿದೆ ಈ ಕೃತ್ಯ: ಐವರು ದುಷ್ಕರ್ಮಿಗಳಿಂದ ಬಾಲಕಿ ಬೆತ್ತಲೆಗೊಳಿಸಿ ಚಿತ್ರಹಿಂಸೆ – ಪೊಲೀಸರಿಂದ ಆರೋಪಿಗಳ ಫೋಟೋ ರಿಲೀಸ್
ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ 9 ದಿನದ ಶಿಶುವಿನಲ್ಲಿ ಕೊರೊನಾ ಸೋಂಕು ಧೃಢಪಟ್ಟಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಬಾಗಲಕೋಟೆ ಜಿಲ್ಲೆಯಲ್ಲಿ 6 ತಿಂಗಳ ಕಂದಮ್ಮ ಸೇರಿದಂತೆ ಹಲವು ಮಕ್ಕಳು ಸೋಂಕಿನಿಂದ ಬಳಲುತ್ತಿದ್ದಾರೆ. ತಾಯಂದಿರಿಗೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಮಕ್ಕಳು ಹಾಗೂ ಶಿಶುಗಳಿಗೂ ಸೋಂಕು ಹರಡಿದೆ ಎಂದು ಹೇಳಲಾಗುತ್ತಿದೆ.