ಮಂಗಳೂರು: ಚೈಲ್ಡ್ ಕೇರ್ ಸೆಂಟರ್ ವೊಂದರಲ್ಲಿ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಕೋವಿಡ್ ಜನಜಾಗೃತಿ ಹೆಸರಲ್ಲಿ ಚೈಲ್ಡ್ ಕೇರ್ ಸೆಂಟರ್ ನಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಕೋಣಾಜೆ ಮೂಲದ ಉಸ್ತಾದ್ ಅಯೂಬ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲ್ಕನಿಯಲ್ಲಿ ನಿಂತು ಬೆತ್ತಲೆ ಪೋಸ್ ಕೊಡುತ್ತಿದ್ದ ಯುವತಿಯರು ಅರೆಸ್ಟ್
ಆರೋಪಿ ಅಯೂಬ್ 2 ತಿಂಗಳಿಂದ 5ಕ್ಕಿಂತ ಹೆಚ್ಚು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದ. ಪಾಂಡವೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ತನಿಖೆಗಾಗಿ ಡಿಸಿಪಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದೆ.