alex Certify SHOCKING NEWS: ಶವವಾಗಿ ಪತ್ತೆಯಾದ ಮಾಜಿ ಶಾಸಕರ ಮೊಮ್ಮಕ್ಕಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಶವವಾಗಿ ಪತ್ತೆಯಾದ ಮಾಜಿ ಶಾಸಕರ ಮೊಮ್ಮಕ್ಕಳು

ರಾಯಚೂರು: ಮಾಜಿ ಶಾಸಕರ ಇಬ್ಬರು ಮೊಮ್ಮಕ್ಕಳು ಇದೀಗ ಶವವಾಗಿ ಪತ್ತೆಯಾಗಿರುವ ಘಟನೆ ರಾಯಚೂರಿನ ಮಾನ್ವಿಯಲ್ಲಿ ನಡೆದಿದೆ. ಮನೆಯ ಮುಂದೆಯೇ ಆಟವಾಡುತ್ತಿದ್ದ ಇಬ್ಬರು ಬಾಲಕರು ನಿನ್ನೆ ಮಧ್ಯಾಹ್ನದಿಂದ ಏಕಾಏಕಿ ನಾಪತ್ತೆಯಾಗಿದ್ದರು.

ಮಾನ್ವಿ ಮಾಜಿ ಶಾಸಕ ಹಂಪಯ್ಯ ನಾಯಕ್ ಅವರ ಮೊಮ್ಮಕ್ಕಳಾಗಿದ್ದ 9 ವರ್ಷದ ವರುಣ್ ಹಾಗೂ 5 ವರ್ಷದ ಸಣ್ಣಯ್ಯ ಮೃತ ಬಾಲಕರು. ನಿನ್ನೆ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಮಕ್ಕಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಆದರೆ ಎಲ್ಲಿಯೂ ಬಾಲಕರ ಸುಳಿವಿರಲಿಲ್ಲ. ಇಂದು ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಸಿಎಂ ನಿವಾಸದ ಎದುರು ಹೈಡ್ರಾಮ; ಪಂಚಮಸಾಲಿ ಸಮುದಾಯದ ಪ್ರತಿಭಟನೆ

ಆಟವಾಡುತ್ತಿದ್ದ ಮಕ್ಕಳು ಈಜಲೆಂದು ಕೆರೆಗೆ ಇಳಿದಿದ್ದಾರೆ. ನೀರಿನಲ್ಲಿ ಮುಳುಗಿ ಬಾಲಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...