ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ನಡುವೆ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದ್ದು ಬರೋಬ್ಬರಿ 3000 ಕೊರೊನಾ ಸೋಂಕಿತರು ಬೆಂಗಳೂರಿನಿಂದ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಸುಮಾರು 2000-3000 ಸೋಂಕಿತರು ತಮ್ಮ ಫೋನ್ ಸ್ವಿಚ್ ಆಫ್ ಮಾಡಿದ್ದು ನಾಪತ್ತೆಯಾಗಿದ್ದಾರೆ. ಅವರ ಪತ್ತೆಗಾಗಿ ಪೊಲೀಸರಿಗೆ ಆದೇಶ ನೀಡಲಾಗಿದೆ ಎಂದು ಸ್ವತ: ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ ನೀಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ರಾಜ್ಯದಲ್ಲಿ ಉಚಿತ ಲಸಿಕೆ ನಿಡಲಾಗುತ್ತಿದೆ. ಹಾಗಾಗಿ ಶೇ.90ರಷ್ಟು ಪ್ರಕರಣಗಳನ್ನು ಕಡಿಮೆ ಮಾಡಬಹುದು. ಆದರೆ ಈ ರೀತಿ ಫೋನ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗುವುದು, ಕೊನೇ ಘಳಿಗೆಯಲ್ಲಿ ಆಸ್ಪತ್ರೆಗೆ ದಾಖಲಾಗುವುದರಿಂದ ಅಪಾಯದ ಜೊತೆಗೆ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತದೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.