ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದ ಆರ್.ಆರ್. ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ನವೀನ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ರಾಜ್ಯ ಗುಪ್ತವಾರ್ತೆಗೆ ನವೀನ್ ಅವರನ್ನು ವರ್ಗಾವಣೆ ಮಾಡಿದ್ದು, ಆರ್.ಪಿ. ಅನಿಲ್ ಅವರನ್ನು ಆರ್.ಆರ್. ನಗರ ಠಾಣೆಗೆ ನಿಯೋಜಿಸಲಾಗಿದೆ. ಅನಿಲ್ ಮಲ್ಲೇಶ್ವರಂ ಸಂಚಾರ ಠಾಣೆಯ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಕುಸುಮಾ ಅವರ ನಾಮಪತ್ರ ಸಲ್ಲಿಕೆ ದಿನ ನೀತಿಸಂಹಿತೆ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಿಸಿದ್ದರು. ಕಾಂಗ್ರೆಸ್ ನಾಯಕರ ಒತ್ತಡಕ್ಕೆ ಮಣಿದು ನವೀನ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗಿದೆ.