ಬೆಂಗಳೂರು: ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಹುಟ್ಟುಹಬ್ಬದ ದಿನವಾದ ಇಂದು ಅವರ ಬೆಂಬಲಿಗರಿಗೆ ಸಿಹಿ ಸುದ್ದಿ ಸಿಕ್ಕಿದೆ.
ಕೊರೊನಾ ಸೋಂಕಿನಿಂದ ಗುಣಮುಖರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ಅವರಿಗೆ ಕೋವಿಡ್ ಟೆಸ್ಟ್ ನೆಗೆಟಿವ್ ವರದಿ ಬಂದಿದೆ.
ಎರಡನೇ ಬಾರಿ ನಡೆಸಿದ ಕೋವಿಡ್ ಟೆಸ್ಟ್ ವರದಿಯಲ್ಲಿ ನೆಗೆಟಿವ್ ರಿಪೋರ್ಟ್ ಬಂದಿದೆ. ನಾಳೆ ಆಸ್ಪತ್ರೆಯಿಂದ ಸಿದ್ದರಾಮಯ್ಯ ಬಿಡುಗಡೆಯಾಗಲಿದ್ದಾರೆ. ಕೊರೊನಾ ಪಾಸಿಟಿವ್ ಬಂದಿದ್ದರಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದರಾಮಯ್ಯ ಗುಣಮುಖರಾಗಿದ್ದಾರೆ. ನಾಳೆ ಡಿಸ್ಚಾರ್ಜ್ ಮಾಡಲಾಗುವುದು ಎನ್ನಲಾಗಿದೆ. ಇದೇ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದ ಸಿಎಂ ಯಡಿಯೂರಪ್ಪ ಸಂಪೂರ್ಣ ಗುಣಮುಖರಾಗಿ 2 ದಿನಗಳ ಹಿಂದೆ ಡಿಸ್ಚಾರ್ಜ್ ಆಗಿದ್ದಾರೆ.