ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಚಾರಕ್ಕೆ ನಿರ್ಬಂಧ ಹೇರಬೇಕೆಂದು ಬಿಜೆಪಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಕ್ಷೇತ್ರದಲ್ಲಿ ಪ್ರಚಾರ ಮಾಡಿದ ಸಿದ್ದರಾಮಯ್ಯ, ಅವರು ಬಿಜೆಪಿ ನಾಯಕರ ವಿರುದ್ಧ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಹಾಗಾಗಿ ಅವರು ಪ್ರಚಾರದಲ್ಲಿ ಭಾಗವಹಿಸದಂತೆ ನಿರ್ಬಂಧಿಸಬೇಕೆಂದು ಬಿಜೆಪಿ ಕಾನೂನು ಪ್ರಕೋಷ್ಠದ ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.
ಬಿಜೆಪಿ ಅಭ್ಯರ್ಥಿ ವಿರುದ್ಧ ಪ್ರಚಾರದ ವೇಳೆ ಮಾತನಾಡಿದ ಸಿದ್ದರಾಮಯ್ಯ ಯಾರಿಗೂ ಹೇಳದೆ ಕೇಳದೆ 30 ಕೋಟಿ ರೂಪಾಯಿ ಪಡೆದುಕೊಂಡು ಬಿಜೆಪಿ ಸೇರಿದ್ದಾರೆ. ಮುನಿರತ್ನ ಮಾರಾಟವಾಗಿದ್ದರೆ. ಯಡಿಯೂರಪ್ಪ ಚೆಕ್ ನಲ್ಲಿ ಲಂಚ ಪಡೆದುಕೊಂಡಿದ್ದು ಅವರ ಮಗ ಆರ್ಟಿಜಿಎಸ್ ಮೂಲಕ ಹಣ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ್ದು ಅವರ ಪ್ರಚಾರಕ್ಕೆ ನಿರ್ಬಂಧ ಹೇರಬೇಕೆಂದು ಮನವಿ ಮಾಡಲಾಗಿದೆ.