
ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಬರಹ ಪೋಸ್ಟ್ ಮಾಡಿದ ಇಬ್ಬರ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮಂಜು, ಆನಂದ ಕುಮಾರ್ ಎಂಬುವರ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಕಾಂಗ್ರೆಸ್ ಕಾನೂನು ಘಟಕ ಈ ಕುರಿತಾಗಿ ದೂರು ನೀಡಿದ್ದು ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.