alex Certify ಗ್ರಾಮ ಪಂಚಾಯಿತಿ ಅವಧಿ ವಿಸ್ತರಿಸಲು ಸಿದ್ದರಾಮಯ್ಯ ಒತ್ತಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮ ಪಂಚಾಯಿತಿ ಅವಧಿ ವಿಸ್ತರಿಸಲು ಸಿದ್ದರಾಮಯ್ಯ ಒತ್ತಾಯ

ಗ್ರಾಮ ಪಂಚಾಯಿತಿಗಳಿಗೆ ಯಾವುದೇ ಕಾರಣಕ್ಕೂ ಹೊಸ ಆಡಳಿತ ಸಮಿತಿಯನ್ನು ರಚಿಸಬಾರದು. ಈ ಮೂಲಕ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಪ್ರಸ್ತುತ ಅಧಿಕಾರದಲ್ಲಿರುವ ಎಲ್ಲ ಗ್ರಾಮ ಪಂಚಾಯಿತಿ ಮತ್ತು ಸದಸ್ಯರನ್ನು ಚುನಾವಣೆ ನಡೆಸುವವರೆಗೆ ಮುಂದುವರೆಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಗ್ರಾಮಪಂಚಾಯಿತಿಗಳ ಅವಧಿಯನ್ನು ವಿಸ್ತರಿಸಬೇಕು. ಯಾವುದೇ ಕಾರಣಕ್ಕೂ ಆಡಳಿತ ಸಮಿತಿ ರಚಿಸಬಾರದು. ಆಡಳಿತಾಧಿಕಾರಿಯನ್ನು ನೇಮಿಸಬಾರದು. ಹೊಸ ಆಡಳಿತ ಸಮಿತಿಯನ್ನು ನೇಮಿಸುವ ಮೂಲಕ ಕೆಟ್ಟ ಸಂಪ್ರದಾಯಕ್ಕೆ ಸರ್ಕಾರ ನಾಂದಿ ಹಾಡಬಾರದು ಎಂದು ಒತ್ತಾಯಿಸಿದ್ದಾರೆ.

ಕೊರೋನಾ ಸಂಕಷ್ಟದ ನೆಪದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಸದೆ ಆಡಳಿತಾಧಿಕಾರಿಗಳನ್ನು ನೇಮಿಸಲು ಅಥವಾ ನಾಮನಿರ್ದೇಶಿತ ಆಡಳಿತ ಸಮಿತಿ ರಚಿಸಲು ಸರ್ಕಾರ ಮುಂದಾದರೆ ಸಂವಿಧಾನದ ಆಶಯಕ್ಕೆ ವಿರುದ್ಧವಾಗುತ್ತದೆ. ತಾತ್ಕಾಲಿಕ ವ್ಯವಸ್ಥೆ ಮಾಡುವುದಾದರೆ 1987 ರಲ್ಲಿ ಮಾಡಿದಂತೆ ಗ್ರಾಮಪಂಚಾಯಿತಿಗಳ ಅವಧಿಯನ್ನು ವಿಸ್ತರಿಸಿ ಪ್ರಜಾಪ್ರಭುತ್ವದ ಆಶಯಗಳನ್ನು ಉಳಿಸಬೇಕು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...